Coastal Bulletin

ಯುರೋಪ್ : ಇಲ್ಲಿನ ಪಶ್ಚಿಮ ಭಾಗಗಳಲ್ಲಿ ಭಾರಿ ಮಳೆಯಾಗ್ತಿದ್ದು ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದೆ.ಜರ್ಮನಿಯಲ್ಲಿ ಅನೇಕರು ಜೀವ ಕಳೆದುಕೊಂಡಿದ್ದಾರೆ. ಪ್ರವಾಹದಲ್ಲಿ ಈವರೆಗೂ ಮೃತಪಟ್ಟವರ ಸಂಖ್ಯೆ 170 ಕ್ಕೆ ಏರಿದೆ.ಇನ್ನೂ ರಕ್ಷಣಾ ಕಾರ್ಯಾಚರಣೆ ಕೂಡ ವೇಗ ಪಡೆದುಕೊಂಡಿದೆ.

ಅನೇಕ ಮನೆಗಳು ಕುಸಿದಿದ್ದು, ರಸ್ತೆಗಳು ಜಲಾವೃತಗೊಂಡಿದೆ.ಪಶ್ಚಿಮ ಜರ್ಮನಿಯ ಸ್ಟೈನ್ ಬಕ್ತಾಲ್ ಅಣೆಕಟ್ಟು ಅಪಾಯದಲ್ಲಿದೆ. ಸುಮಾರು 4500 ಜನರನ್ನು ಮನೆಗಳಿಂದ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

(9).jpeg" style="width: 268px;">

ನಿನ್ನೆಯಿಂದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೀರಿನ ಮಟ್ಟ ಕಡಿಮೆ ಆಗಿದೆ. ಇದರಿಂದಾಗಿ ಪ್ರವಾಹದಲ್ಲಿ ಕೊಚ್ಚಿ ಹೋದ ವಾಹನಗಳು, ಶವಗಳು ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Comment