ನವದೆಹಲಿ :ಭಾರತದ ಬ್ಯಾಂಕ್‌ಗಳಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸಂಬಂಧಿಸಿದ 18 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡು ನಷ್ಟಕ್ಕೀಡಾದ ಬ್ಯಾಂಕ್ ಗಳಿಗೆ 9000 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಇಡಿ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ತಮ್ಮ ಕಂಪನಿಗಳ ಮೂಲಕ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳನ್ನು ವಂಚಿಸಿದ್ದಾರೆ. ಇದರಿಂದಾಗಿ ಬ್ಯಾಂಕ್‌ಗಳಿಗೆ
ಸುಮಾರು ₹22,585.83 ಕೋಟಿ ನಷ್ಟವಾಗಿದೆ ಎಂದು ಸಿಬಿಐ ಎಫ್ಐಆರ್ ದಾಖಲಿಸಿತ್ತು.ವಿದೇಶಗಳಲ್ಲಿರುವ ₹969 ಕೋಟಿ ಸೇರಿದಂತೆ ₹18,170.02 ಮೌಲ್ಯದ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ತಕ್ಷಣ ಕ್ರಮ ಕೈಗೊಂಡಿದೆ.















