ಮಂಗಳೂರು:ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಅಧಿಕಾರಿಗಳು ರಾಜ್ಯದೆಲ್ಲೆಡೆ ಏಕಕಾಲಕ್ಕೆ ದಿಢೀರ್ ದಾಳಿ ನಡೆಸುವ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ದ.ಕ ಜಿಲ್ಲಾ ನಗರಾಭಿವೃದ್ಧಿ ಘಟಕದ ಎಕ್ಸಿಕ್ಯೂಟಿವ್ ಇಂಜಿನಿಯರ್ ಜಿ. ಶ್ರೀಧರ್ ಅವರ ಮನೆ ಹಾಗೂ ಕಚೇರಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದು ಎಸಿಬಿ ಅಧಿಕಾರಿಗಳು ಶ್ರೀಧರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಮಂಗಳೂರು, ಉಡುಪಿ, ಮಂಡ್ಯ, ಬೆಂಗಳೂರು ಸೇರಿದಂತೆ 30ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ.ರಾಜ್ಯದ ಒಂಬತ್ತು ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ, ಕಚೇರಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ಭಾಗವಾಗಿ ಮಂಗಳೂರಲ್ಲೂ
ಎಸಿಬಿ ದಾಳಿ ನಡೆದಿದೆ.
ಮಂಗಳೂರಿನ ನಗರ ಅಭಿವೃದ್ಧಿ ಘಟಕದ ಇಂಜಿನಿಯರ್ ಜಿ. ಶ್ರೀಧರ್, ಉಡುಪಿಯ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಇಂಜಿನಿಯರ್ ಕೃಷ್ಣ, ಕೆಆರ್ ಡಿಎಲ್ ಅಧಿಕಾರಿ ಆರ್. ಪಿ ಕುಲಕರ್ಣಿ, ಕೋಲಾರದ ಮಾಲೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಾಯಕ ನಿರ್ದೇಶಕ ಎಚ್.ಆರ್. ಕೃಷ್ಣಪ್ಪ, ಮಂಡ್ಯದ ಅರಣ್ಯ ಅಧಿಕಾರಿ ವೆಂಕಟೇಶ್, ವಿಜಯಪುರ ಹೆಸ್ಕಾಂ ಇಂಜಿನಿಯರ್ ಸಿದ್ಧರಾಮ ಮಲ್ಲಿಕಾರ್ಜುನ್, ಕೋರಮಂಗಲ ಆರ್‌ಟಿಓ ಅಧಿಕಾರಿ ಕೃಷ್ಣಮೂರ್ತಿ, ಬಳ್ಳಾರಿ ಎಲೆಕ್ರಿಕಲ್ ಇಂಜಿನಿಯರ್ ವಿಜಯ್ ಕುಮಾರ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.















