Coastal Bulletin

ಮಂಗಳೂರು: ಶಾಲಾ ಶುಲ್ಕಕ್ಕೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿ ಹೊರಡಿಸಿದ ಹೇಳಿಕೆ, ಆದೇಶವನ್ನು ಮರುಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿ ದ. ಕ. ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟ ವತಿಯಿಂದ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಕೋವಿಡ್  ನಿಂದಾಗಿ ಕಳೆದ ಎರಡು ವರ್ಷಗಳಿಂದ ಮಕ್ಕಳ ಶೈಕ್ಷಣಿಕ ಜೀವನದಲ್ಲಿ ಏರುಪೇರಾಗುತ್ತಿರುವುದರಿಂದ ನಮ್ಮ ಶಾಲಾ ಆಡಳಿತ ಮಂಡಳಿಯವರಿಗೆ ತಮ್ಮ ತಮ್ಮ ವಿದ್ಯಾ ಸಂಸ್ಥೆಗಳನ್ನು ನಡೆಸಲು ಬಹಳ ಕಷ್ಟ ವಾಗುತ್ತಿದೆ. ಆದರೂ ನಾವು ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ

ತೊಂದರೆಯಾಗಬಾರದೆಂದು ಸರಕಾರದ, ಶಿಕ್ಷಣ ಇಲಾಖೆಯ ಆದೇಶದ ಮೇರೆಗೆ ಆನ್ಲೈನ್, ಆಫ್ಲೈನ್ 

 ಮೂಲಕ ಶಿಕ್ಷಣ ನೀಡುತ್ತಿದ್ದೇವೆ. ಸರಕಾರ ನೀಡಿದ ಸೂಚನೆ ಪ್ರಕಾರ ಶಾಲಾ ಶುಲ್ಕ ದಲ್ಲಿ  ಶೇ.30  ಕಡಿತಗೊಳಿಸಿ ಕಂತುಗಳ ಮೂಲಕ ಪಾವತಿಸುವಂತೆ ಪೋಷಕರಿಗೆ ಸೂಚಿಸಿದ್ದೇವೆ. ಆದರೂ ಹೆಚ್ಚಿನ ಪೋಷಕರು ಶುಲ್ಕ ಪಾವತಿ ಮಾಡುತ್ತಿಲ್ಲ. ಅದರೂ ನಾವು ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದೇವೆ.

ನಮ್ಮಲ್ಲಿ ಒಂದು ವರ್ಷ ಪೂರ್ತಿ ಶಿಕ್ಷಣ ಪಡೆದು ಯಾವುದೇ ಶುಲ್ಕ ಪಾವತಿಸದವರಿಗೆ ನಾವು ವರ್ಗಾವಣೆ ಪತ್ರವನ್ನು ನೀಡಿದರೆ, ನಾವು ವಿದ್ಯಾ ಸಂಸ್ಥೆಗಳನ್ನು ನಡೆಸುವುದಾದರು ಹೇಗೆ?  ಪೋಷಕರು ಶುಲ್ಕ ಪಾವತಿಸದೆ ಇದ್ದರೆ ಶಿಕ್ಷಕರಿಗೆ ವೇತನ ಪಾವತಿಸುವುದಾದರೂ ಹೇಗೆ?

ಶಾಲಾ ಶುಲ್ಕ ಪಾವತಿಗೆ ಸಂಬಂಧಿಸಿ ಶುಕ್ರವಾರ ಮಾಧ್ಯಮದಲ್ಲಿ ಪ್ರಕಟವಾದ ಜಿಲ್ಲಾಧಿಕಾರಿ ಅವರ ಹೇಳಿಕೆ ನಮ್ಮ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರಿಗೆ,

ನಮ್ಮಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ, ಸಹಶಿಕ್ಷಕರಿಗೆ ಬಹಳಷ್ಟು ನೋವನ್ನುಂಟುಮಾಡಿದೆ. ತಾವು ದಯಮಾಡಿ ಸರಕಾರ, ಶಿಕ್ಷಣ ಇಲಾಖೆಯ ಜೊತೆಗೂಡಿ ನಮ್ಮ ವಿದ್ಯಾರ್ಥಿಗಳ ಪೋಷಕರಿಗೂ, ಶಾಲಾ ಆಡಳಿತ ಮಂಡಳಿಯವರಿಗೂ ಮತ್ತು ಶಿಕ್ಷಕರಿಗೂ ಅನುಕೂಲವಾಗುವ ರೀತಿಯಲ್ಲಿ ಸಹಕರಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ಈ ಸಂದರ್ಭ ಮನವರಿಕೆ ಮಾಡಲಾಯಿತು. 

 ದ.ಕ. ಮತ್ತು ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಕೋಶಾಧಿಕಾರಿ ಸೀತಾರಾಮ ರೈ ಸವಣೂರು, ಉಪಾಧ್ಯಕ್ಷ ಮೂಸಬ್ಬ ಪಿ. ಬ್ಯಾರಿ, ಕಾರ್ಯದರ್ಶಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಜತೆ ಕಾರ್ಯದರ್ಶಿ ಜಯಸೂರ್ಯ ರೈ, ಅಶ್ವಿನ್ ಶೆಟ್ಟಿ ಉಪಸ್ಥಿತರಿದ್ದರು. ಒದಗಿಸಬೇಕು, ಶಾಲಾ ಶುಲ್ಕ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿ ಹೊರಡಿಸಿದ ಹೇಳಿಕೆ, ಆದೇಶವನ್ನು ಮರುಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿ ದ. ಕ. ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟ ವತಿಯಿಂದ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

Leave a Comment