60ಕ್ಕೂ ಹೆಚ್ಚು ಮಂಗಗಳಿಗೆ ವಿಷವುಣಿಸಿ ಸಾಯಿಸಿದ ಅಮಾನವೀಯ ಕೃತ್ಯ ಸಕಲೇಶಪುರ ತಾಲೂಕಿನ ಚೌಡನಹಳ್ಳಿ ಮತ್ತು ಬೇಗೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಬೇಗೂರು ಅರಣ್ಯ ವ್ಯಾಪ್ತಿಯಲ್ಲಿ ಮತ್ತು ಚೌಡನಹಳ್ಳಿ ಗ್ರಾಮದ ಹಲವೆಡೆ ಮಂಗಗಳನ್ನು ಚೀಲದಲ್ಲಿ ಕಟ್ಟಿ ಬಿಸಾಕಲಾಗಿತ್ತು. ಅದರಲ್ಲಿ 60ಕ್ಕೂ ಹೆಚ್ಚು ಮಂಗಗಳು ಸಾವನ್ನಪ್ಪಿದ್ದು 20ಕ್ಕೂ
ಹೆಚ್ಚು ಮಂಗಗಳು ಜೀವನ್ಮರಣ ಸ್ಥಿತಿಯಲ್ಲಿದ್ದವು.ಇದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
















