Coastal Bulletin

ಬಂಟ್ವಾಳ : ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿಯಿಂದ ಬಂಟ್ವಾಳ ನಗರ ಠಾಣೆಯಲ್ಲಿ ಪುರುಷೋತ್ತಮ ಎಂಬವರ ಮೇಲೆ ದೂರು ದಾಖಲು ಮಾಡಿದ್ದಾರೆ.

ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತನ ಮೇಲೆ  ಆತನ ಪತ್ನಿಯ ಅಕ್ಕನ ಮಗಳೇ ತನಗೆ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ  ದೂರು ನೀಡಿದ್ದಾಳೆ. ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ ಮನೆಯವರನ್ನ ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ

ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಯುವತಿ ಬಿ.ಸಿ.ರೋಡ್ ನ ಸಂಬಂಧಿಕರ ಮನೆಯಿಂದ ಕಾಲೇಜು ಹೋಗುತ್ತಿದ್ದಳು. ಅಲ್ಲೇ ಆರೋಪಿ ಪುರುಷೋತ್ತಮ ಕೂಡ ವಾಸವಾಗಿದ್ದನು. ಆಗಿನಿಂದಲೇ ಆರೋಪಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಅವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಲೇ ಬಂದಿದ್ದು ಕಾಟ ತಡೆಯಲಾಗದೆ ಮನೆಯವರಿಗೆ ತಿಳಿಸಿ ಠಾಣೆಗೆ ದೂರು ನೀಡಿದ್ದಾಳೆ.

Leave a Comment