ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಶರಣು ಸಲಗಾರ್ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಬಸವನಗೌಡ ತುರವಿಹಾಳ್ ಅವರು ಇಂದು ವಿಧಾನ ಸೌಧದಲ್ಲಿ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು
ರಾಜ್ಯ ವಿಧಾನಸಭೆಗೆ 2021ರ ಏಪ್ರಿಲ್ ನಲ್ಲಿ ನಡೆದ ಉಪಚುನಾವಣೆಯಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಶರಣು ಸಲಗಾರ್ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಬಸವನಗೌಡ ತುರವಿಹಾಳ್ ಅವರು ಇಂದು ವಿಧಾನ ಸೌಧದಲ್ಲಿ ಶಾಸಕರಾಗಿ ಪ್ರಮಾಣವಚನ
ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಪ್ರಭು ಚೌವನ್, ಶಾಸಕರಾದ ಡಿ.ಕೆ.ಶಿವಕುಮಾರ್, ಅಜಯ್ ಸಿಂಗ್ ಸೇರಿದಂತೆ ಇನ್ನೂ ಅನೇಕ ವಿಧಾನಸಭಾ ಹಾಗೂ ವಿಧಾನ ಪರಿಷತ್ ಸದಸ್ಯರುಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.















