Coastal Bulletin

ಬೆಂಗಳೂರು : ಕೊರೋನಾ ಸೋಂಕಿನ ಎರಡನೇ ಅಲೆಯ ಅಬ್ಬರ ಮತ್ತು ನಿರೂಪಕ ಕಿಚ್ಚ ಸುದೀಪ್ ಗೈರು ಕಾರಣದಿಂದ ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ಮೊಟಕುಗೊಂಡಿತ್ತು .ಇದರಿಂದ ಪ್ರೇಕ್ಷಕರು ನಿರಾಸೆಗೊಂಡಿದ್ದು ಮಾತ್ರವಲ್ಲದೇ ವಾಹಿನಿಗೂ ದೊಡ್ಡ ಮೊತ್ತದ ನಷ್ಟದ ಭೀತಿ ಎದುರಾಗಿತ್ತು.

ಇದೀಗ ಎರಡನೆ ಅಲೆಯ ಅಬ್ಬರ ಕಡಿಮೆಯಾಗುತ್ತಿರುವಂತೆ ಬಿಗ್ ಬಾಸ್ ಶೋ ಮತ್ತೆ ಪ್ರಾರಂಭಿಸಲು ನಿರ್ಧರಿಸಲಾಗಿದೆ . ಕೊರೋನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಶೋ ಮತ್ತೆ ಪ್ರಾರಂಭಿಸಲು ವಾಹಿನಿ ನಿರ್ಧರಿಸಿದ್ದು ಅಧಿಕೃತವಾಗಿದೆ . ವೀಕ್ಷಕರಿಗೆ ಮತ್ತಷ್ಟು ನವೀನ ಸ್ಪರ್ಶ ನೀಡಲು ಕರ್ಲಸ್ ಕನ್ನಡ ವಾಹಿನಿ ತಯಾರಿ ಮಾಡಿಕೊಂಡಿದೆ.ಅದಕ್ಕೆ ಪೂರಕವೆಂಬಂತೆ ಬಿಜಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ತಮ್ಮ ಪೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ .



Highlight

ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು.  ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.ಇದೊಂಥರಾ ಎರಡನೇ ಇನಿಂಗ್ಸ್, ಯಾರು ಚೆನ್ನಾಗಿ ಆಡುತ್ತಿದ್ದಾರೆ ಎಲ್ಲಿ ಚೆನ್ನಾಗಿ ಆಡಬಹುದಿತ್ತು ಎಲ್ಲಿ ಚೆನ್ನಾಗಿ

ಆಡಬೇಕಾಗಿತ್ತು,ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್‍ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು.. ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿ

Leave a Comment