ಮಂಗಳೂರು:ದ.ಕ. ಜಿಲ್ಲೆಯಲ್ಲಿ ಜೂನ್ 23ರಿಂದ ಹೊಸ ಮಾರ್ಗಸೂಚಿ ಜಾರಿಗೆ ಬರಲಿದ್ದು, ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯ ತನಕ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಬಸ್ ಗಳು 7 ರಿಂದ ಮಧ್ಯಾಹ್ನ 1 ರ ತನಕ 50% ಜನಸಂಖ್ಯೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಹೊಸ ಮಾರ್ಗಸೂಚಿಯಲ್ಲಿ ಹೆಚ್ಚಿನ ವಿನಾಯಿತಿ ನೀಡಲಾಗಿದೆ.ಬೆಳಿಗ್ಗೆ 7ರಿಂದ ಮಧ್ಯಾಹ್ನ 2ರ ತನಕ ಎಲ್ಲಾ ಅಂಗಡಿಗಳು ಓಪನ್ ಆಗಲಿವೆ.














