ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿರುವ ಸಂದರ್ಭದಲ್ಲಿ ಸಿಎಂ ಬದಲಾವಣೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನೀಡುವ ಸೂಚನೆ ಮೇರೆಗೆ ಜುಲೈ 26ರ ನಂತರ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ, ಜುಲೈ 25ಕ್ಕೆ ಹೈಕಮಾಂಡ್ ನಿಂದ ಸೂಚನೆ ಬರುತ್ತದೆ, ಅದರಂತೆ ನಡೆದುಕೊಳ್ಳುತ್ತೇನೆ, ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಮುಂದಿನ ಎರಡು
ವರ್ಷ ಪಕ್ಷಕ್ಕಾಗಿ ಸಾಕಷ್ಟು ದುಡಿದು ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಉದ್ದೇಶ ಎಂದು ಹೇಳಿವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪದತ್ಯಾಗದ ಸುಳಿವು ನೀಡಿದ್ದಾರೆ.















