ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ 15 ಸದಸ್ಯರನ್ನೊಳಗೊಂಡ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ.ಜೂನ್ 18ರಿಂದ ಸೌತಾಂಪ್ಟನ್ ನಲ್ಲಿ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ.
ವಿರಾಟ್ ಕೊಹ್ಲಿಯ 15ರ ಬಳಗದಲ್ಲಿ ಕೆ.ಎಲ್. ರಾಹುಲ್, ಮಯಾಂಕ್ ಅಗರ್ ವಾಲ್ ಅವಕಾಶ ವಂಚಿತರಾಗಿದ್ದಾರೆ.ಕಳೆದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಸರಣಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ್ದ ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಥಾಕೂರ್ ಆಯ್ಕೆ ಮಾಡಲಾಗಿಲ್ಲ.
ಟೀಮ್ ಇಂಡಿಯಾದ 15ರ ಬಳಗ.
ವಿರಾಟ್
ಕೊಹ್ಲಿ (ನಾಯಕ), ಅಜಿಂಕ್ಯಾ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್, ವೃದ್ದಿಮಾನ್ ಸಾಹ, ಆರ್. ಅಶ್ವಿನ್, ರವೀಂದ್ರ ಜಡೇಜಾ, ಜಸ್ಪ್ರಿತ್ ಬೂಮ್ರಾ, ಇಶಾಂತ್ ಶರ್ಮಾ, ಮಹಮ್ಮದ್ ಶಮಿ, ಉಮೇಶ್ ಯಾದವ್, ಮಹಮ್ಮದ್ ಸಿರಾಜ್.














