Coastal Bulletin

ಬಂಟ್ವಾಳ:ಕೆಲಸದ ಒತ್ತಡದಲ್ಲಿ ದಿನವಡೀ ಬಿಝಿಯಾಗಿರುವ ಬಂಟ್ವಾಳ ತಾಲೂಕು ಕಚೇರಿಯ ಸಿಬ್ಬಂದಿಗಳು ನಾಲ್ಕನೇ ಶನಿವಾರದ ರಜಾದಿನವನ್ನು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿಗೆ ಪಾದಯಾತ್ರೆಯನ್ನು ಹಮ್ಮಿಕೊಂಡರು.

 ಬಂಟ್ವಾಳ ತಹಶೀಲ್ದಾರ್ ರಶ್ಮಿ .ಎಸ್.ಆರ್ ಅವರ ನೇತೃತ್ವದಲ್ಲಿ ಶನಿವಾರ ಮುಂಜಾನೆ 5.00 ಗಂಟೆಗೆ ಬಂಟ್ವಾಳ ಮಿನಿ ವಿಧಾನಸೌಧದ ಮುಂಭಾಗದಲ್ಲಿರುವ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಿಂದ ಪೊಳಲಿ ಶ್ರೀ ಕ್ಷೇತ್ರಕ್ಕೆ ಕಾಲ್ನಡಿಗೆ ಜಾಥಾ ಹೋರಟರು.

ಪಾದಯಾತ್ರೆಗೆ ಚಾಲನೆ ನೀಡಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್‌ ಅವರು ತಮ್ಮ ಸಿಬ್ಬಂದಿಗಳ ಜೊತೆ ಉತ್ಸಾಹದಿಂದ ಹೆಜ್ಜೆ

ಹಾಕಿದರು. ದೇವಳದಲ್ಲಿ ಪಾದಯಾತ್ರೆ ಸಂಪನ್ನಗೊಂಡ ಬಳಿಕ ಶ್ರೀ ರಾಜರಾಜೇಶ್ವರಿ ಅಮ್ಮನವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ನಂತರ ದೇವಳದಲ್ಲಿ ಒಂದಷ್ಟು ಹೊತ್ತು ವಿಶ್ರಾಂತಿಯನ್ನು ಪಡೆದರು.

ಉಪತಹಸೀಲ್ದಾರ್ ನವೀನ್ ಬೆಂಜನಪದವು, ದಿವಾಕರ ಮುಗುಳಿಯ. ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ, ಮಾಹಿಳಾ ಅಧಿಕಾರಿಗಳು ಸಹಿತ ಕಚೇರಿಯ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

Leave a Comment