ಕನ್ನಡ ಕಿರುತೆರೆ ಹಾಗೂ ಚಿತ್ರರಂಗದ ಕ್ಯೂಟ್ ಕಪಲ್ ಚಂದನ್ ಶೆಟ್ಟಿ - ನಿವೇದಿತಾ ದಾಂಪತ್ಯ ಜೀವನ ಅಂತ್ಯ.

Coastal Bulletin
ಕನ್ನಡ ಕಿರುತೆರೆ ಹಾಗೂ ಚಿತ್ರರಂಗದ ಕ್ಯೂಟ್ ಕಪಲ್ ಚಂದನ್ ಶೆಟ್ಟಿ - ನಿವೇದಿತಾ ದಾಂಪತ್ಯ ಜೀವನ ಅಂತ್ಯ.

ಬೆಂಗಳೂರು : ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್​ ಪುರಸ್ಕರಿಸಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನ ಮಂಜೂರು ಮಾಡಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮೂಲಕ ರ್‍ಯಾಪರ್‌ ಚಂದನ್ ಶೆಟ್ಟಿ- ನಿವೇದಿತಾ ಗೌಡ ಅವರ ನಾಲ್ಕು ವರ್ಷದ ದಾಂಪತ್ಯ ಅಂತ್ಯವಾಗಿದೆ.

ಕೆಲ ಕಾರಣಾಂತರಗಳಿಂದ ಕೂಡಿ ಇರಲು ಇಚ್ಚಿಸಿದ ಈ ಜೋಡಿ, ಪ್ರತ್ಯೇಕವಾಗಿರಲು ಬಯಸಿದೆ. ಹೀಗಾಗಿ ವಿಚ್ಛೇದನ ಕೋರಿ ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್​ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿತ್ತು. ಪರಸ್ಪರ ಒಪ್ಪಂದದ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರಿಂದ ಕೋರ್ಟ್​, ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ.


ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ ಇಂದು (ಜೂನ್ 07) ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಬೆಂಚ್​ ಮುಂದೆ ಬಂದಿತ್ತು. ಆದ್ರೆ, ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕು. ಅದರಂತೆ ಚಂದನ್

ಹಾಗೂ ನಿವೇದಿತಾ ಅವರಿಗೆ ಕೌಟುಂಬಿಕ ಕೋರ್ಟ್‌ನ ಮಿಡಿಯೇಷನ್​ ಸೆಂಟರ್​ನಲ್ಲಿ ಮಾತುಕತೆ ನಡೆಸಲಾಯಿತು. ವಿಚ್ಛೇದನ ಪ್ರಕ್ರಿಯೆ ಮೊದಲು ಈ ಸಂಧಾನ ನಡೆಯಲೇಬೇಕು. ಅಂತೆಯೇ ಸಂಧಾನಕಾರರು ಮಾತುಕತೆ ನಡೆಸಿದಾಗ ಇಬ್ಬರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ. ಹೀಗಾಗಿ ಅಂತಿಮವಾಗಿ ಕೋರ್ಟ್​, ವಿಚ್ಛೇದನ ನೀಡಿ ಆದೇಶಿಸಿದೆ.

2020ರ ಫೆಬ್ರವರಿಯಲ್ಲಿ ನಟಿ ನಿವೇದಿತಾ ಗೌಡ ಮತ್ತು ಗಾಯಕ ಚಂದನ್​ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ 4 ವರ್ಷ ಕಳೆದರೂ ಕೂಡ ಅವರಿಬ್ಬರು ಮಗು ಪಡೆದಿರಲಿಲ್ಲ. ಮಗು ಹೊಂದುವ ವಿಚಾರದಲ್ಲಿ ನಿವೇದಿತಾ ಗೌಡ ಅವರಿಗೆ ಒಪ್ಪಿಗೆ ಇರಲಿಲ್ಲ. ಆದ್ದರಿಂದ ದಂಪತಿ ನಡುವೆ ಬಿರುಕು ಮೂಡಿತು. ಈಗ ವಿಚ್ಛೇದನ ಪಡೆದಿದ್ದಾರೆ.

Leave a Comment