ಪದ್ಮವಿಭೂಷಣ ಪಂಡಿತ್ ಶಿವಕುಮಾರ್ ಶರ್ಮ ಅವರು ಮುಂಬೈನಲ್ಲಿ ನಿಧನರಾಗಿದ್ದಾರೆ. ದೇಶದ ಸಾಂಸ್ಕೃತಿಕ ಲೋಕಕ್ಕೆ ಖ್ಯಾತ ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮ ಅವರ ಅಪಾರ ಕೊಡುಗೆ ನೀಡಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಪಂಡಿತ್ ಶಿವಕುಮಾರ್ ಶರ್ಮ ಅವರ ಅಗಲಿಕೆ ಸಾಂಸ್ಕೃತಿಕ ಲೋಕಕ್ಕೆ
ತುಂಬಲಾಗ ನಷ್ಟ. ಅವರ ಸಾವಿನ ನೋವು ಬರಿಸುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಕಲಾರಂಗಕ್ಕೆ ಕಲ್ಪಿಸಲಿ ಎಂದು ಪ್ರಧಾನಿ ಪ್ರಾರ್ಥಿಸಿದ್ದಾರೆ.














