Coastal Bulletin

ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್ ಅಭಿನಯಿಸಿರುವ ‘ಜೇಮ್ಸ್​’ ಸಿನಿಮಾ ಎಲ್ಲ ಕಡೆಗಳಲ್ಲಿ ಧೂಳೆಬ್ಬಿಸಿದೆ. ಮೊದಲ ದಿನ ಸಾವಿರಾರು ಶೋಗಳು ಹೌಸ್​ಫುಲ್​ ಆಗಿವೆ. ಅದರ ಪರಿಣಾಮವಾಗಿ ಚಿತ್ರಕ್ಕೆ ಉತ್ತಮ ಕಲೆಕ್ಷನ್​ ಆಗಿದೆ. ಮೊದಲ ದಿನ ‘ಜೇಮ್ಸ್​’ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​  ಎಷ್ಟಾಗಿರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಇದೆ.

ಗುರುವಾರ (ಮಾ.17) ಈ ಸಿನಿಮಾ ಬರೋಬ್ಬರಿ 30 ಕೋಟಿ ರೂಪಾಯಿಗಿಂತಲೂ ಅಧಿಕ ಗಳಿಕೆ ಮಾಡಿ,  ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 1’ ಚಿತ್ರದ ದಾಖಲೆಯನ್ನೂ ಬ್ರೇಕ್ ಮಾಡಿದೆ. ಕರ್ನಾಟಕ ಮಾತ್ರವಲ್ಲದೇ ಹೊರ

ರಾಜ್ಯ ಮತ್ತು ವಿದೇಶಗಳಲ್ಲೂ ‘ಜೇಮ್ಸ್​’  ಪ್ರದರ್ಶನ ಕಾಣುತ್ತಿದೆ.

 'ಜೇಮ್ಸ್' ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಬೆಂಗಳೂರಿನಲ್ಲಿ ಮಾತನಾಡಿ ಈ ಚಿತ್ರ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಹೊಸ ದಾಖಲೆಯನ್ನು ಸೃಷ್ಟಿಸಿದೆ ಎಂದರು.


Leave a Comment