'ಕೆಜಿಎಫ್’ ಸಿನಿಮಾ ಖ್ಯಾತಿಯ ನಟ ದಿನೇಶ್ ಮಂಗಳೂರು ನಿಧನ

Coastal Bulletin
'ಕೆಜಿಎಫ್’ ಸಿನಿಮಾ ಖ್ಯಾತಿಯ ನಟ ದಿನೇಶ್ ಮಂಗಳೂರು ನಿಧನ

ಕನ್ನಡ ಚಿತ್ರರಂಗಕ್ಕೆ ಇದು ನೋವಿನ ಸುದ್ದಿ. ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು (Dinesh Mangaluru) ಅವರು ನಿಧನರಾಗಿದ್ದಾರೆ. ಇಂದು (ಆಗಸ್ಟ್ 25) ಕುಂದಾಪುರದಲ್ಲಿ ಬೆಳಗಿನ‌ಜಾವ ಅವರು ಕೊನೆಯುಸಿರು ಎಳೆದಿದ್ದಾರೆ.ಮನೆಯಲ್ಲೇ ಅವರು ನಿಧನರಾದರು.

 ‘ಆ ದಿನಗಳು’, ‘ಕೆಜಿಎಫ್’ (KGF), ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ಅವರು ನಟಿಸಿದ್ದರು.

ಕನ್ನಡ ಚಿತ್ರರಂಗದಲ್ಲಿ ಅವರು ಬಹುಬೇಡಿಕೆಯ ಪೋಷಕ ನಟನಾಗಿ ಅವರು ಗುರುತಿಸಿಕೊಂಡಿದ್ದರು. ದಿನೇಶ್ ಮಂಗಳೂರು ನಿಧನಕ್ಕೆ (Dinesh Mangaluru Death) ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ.

Leave a Comment