ಕರಾವಳಿಯ ಪ್ರತಿಭಾನ್ವಿತ ನಟ ರೂಪೇಶ್ ಶೆಟ್ಟಿ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿದ್ದಾರೆ. ಗಿರಿಗಿಟ್ ಚಿತ್ರದ ತುಳುನಾಡಿನ ಪ್ರೇಕ್ಷಕರ ಮನಗೆದ್ದ ನಟ ಈಗ ಬಿಗ್ ಬಾಸ್ ವಿನ್ನರ್ ಆಗಿದ್ದಾರೆ.
ಒಟಿಟಿ ಮೂಲಕ ಕಾಲಿಟ್ಟ ರೂಪೇಶ್ ಶೆಟ್ಟಿ, ಟಿವಿ ಬಿಗ್ ಬಾಸ್‌ನಲ್ಲಿಯೂ ಸ್ಪರ್ಧಿಯಾಗಿ ಪೈಪೋಟಿ ನೀಡಿದ್ದರು. ಒಟಿಟಿ ಟಾಪರ್ ಆಗಿದ್ದ ರೂಪೇಶ್ ಶೆಟ್ಟಿ ಈಗ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿದ್ದಾರೆ.
ರಾಕೇಶ್ ಅಡಿಗಗೆ ಟಫ್ ಫೈಟ್ ಕೊಟ್ಟು, ಬಿಗ್ ಬಾಸ್ ವಿನ್ನರ್ ಟೈಟಲ್ ಅನ್ನ ತಮ್ಮದಾಗಿಸಿಕೊಂಡಿದ್ದಾರೆ. ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದಾರೆ. 2ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ಬಿಗ್‌ಬಾಸ್ 9 ಸೆಪ್ಟೆಂಬರ್ 24ರಿಂದ ಆರಂಭವಾಗಿದ್ದು, ಈ ಬಾರಿಯ ಬಿಗ್‌ಬಾಸ್‌ನಲ್ಲಿ ಅರುಣ್ ಸಾಗರ್, ಅಶ್ವಿನಿ ನಕ್ಷತ್ರ ಧರಾವಾಹಿ ಖ್ಯಾತಿಯ ನಟಿ ಮಯೂರಿ,
ದೀಪಿಕಾ ದಾಸ್, ನವಾಜ್, ದಿವ್ಯಾ ಉರುಡುಗ, ದರ್ಶ್ ಚಂದ್ರಪ್ಪ, ಪ್ರಶಾಂತ್ ಸಂಬರಗಿ, ಅಮೂಲ್ಯ ಗೌಡ, ಸನ್ಯಾ ಅಯ್ಯರ್, ರೂಪೇಶ್ ಶೆಟ್ಟಿ, ವಿನೋದ್ ಗೊಬ್ರಗಾಲ (ಕಾಮಿಡಿ ಕಿಲಾಡಿಗಳು), ಲಕ್ಷ್ಮಿ ಬಾರಮ್ಮ ಸೀರಿಯಲ್ ಖ್ಯಾತಿಯ ನೇಹಾ ಗೌಡ, ನಾನು ಅಂದ್ರೆ ನಂಬರ್, ನಂಬರ್ ಅಂದ್ರೆ ನಾನು ಎನ್ನುವ ಆರ್ಯವರ್ಧನ್ ಗುರೂಜಿ, ರಾಕೇಶ್ ಅಡಿಗ, ಐಶ್ವರ್ಯಾ(ಬೈಕ್ ರೈಡರ್), ರೂಪೇಶ್ ರಾಜಣ್ಣ, ಮಂಗಳ ಗೌರಿಯ ಕಾವ್ಯಶ್ರೀ, ನಿರೂಪಕಿ ಅನುಪಮಾ ಗೌಡ ಸ್ಪರ್ಧಿಗಳಾಗಿ ಭಾಗಿಯಾಗಿದ್ದರು.
ಒಟ್ನಲ್ಲಿ ರೂಪೇಶ್ ಶೆಟ್ಟಿ ಗೆಲವು ಕನ್ನಡಿಗರಿಗೆ, ತುಳುನಾಡಿನ ಸಮಸ್ತ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.














