ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಕೆಜಿಎಫ್ ತಾತ ಎಂದೇ ಫೇಮಸ್ ಆಗಿರುವ ಹಿರಿಯ ನಟ ಕೃಷ್ಣ ಜಿ ರಾವ್ ವಿಧಿವಶರಾಗಿದ್ದಾರೆ.
ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃಷ್ಣ ಜಿ ರಾವ್ ಅವರು ಕೆಜಿಎಫ್ ಮತ್ತು ಕೆಜಿಎಫ್ ಚಾಪ್ಟರ್ 2 ಎರಡೂ ಸಿನಿಮಾಗಳಲ್ಲಿಯೂ ನಟಿಸಿದ್ದರು.
ಕೃಷ್ಣ ಜಿ. ರಾವ್ ಅನಾರೋಗ್ಯದಿಂದ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. ಯಶ್ ಜೊತೆ ನಟಿಸಿ ಜನರ ಮನಗೆದ್ದಿದ್ದ ಕೃಷ್ಣ ಜಿ ರಾವ್ ಅವರನ್ನು ಬೆಂಗಳೂರಿನ ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತುಮಕೂರಿನ ಪಾವಗಡ ಮೂಲದ
ಕೃಷ್ಣ ಜಿ ರಾವ್ ಅವರು ಸಂಬಂಧಿಕರ ಮನೆಗೆ ಹೋಗಿದ್ದ ವೇಳೆ ಆಯಾಸಗೊಂಡು, ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಈ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.
ನ್ಯಾನೋ ನಾರಾಯಣಪ್ಪ ಸಿನಿಮಾದಲ್ಲಿಯೂ ಅಭಿನಯಿಸಿದ್ದ ಕೃಷ್ಣ ಜಿ ರಾವ್ ಅವರು ಕೆಜಿಎಫ್ ಪಾತ್ರದ ಮೂಲಕ ಪ್ರಸಿದ್ಧರಾದವರು. ಇದಲ್ಲದೇ ಕೆಮಿಸ್ಟ್ರಿ ಆಫ್ ಕರಿಯಪ್ಪ, ಕ್ರಿಟಿಕಲ್ ಕೀರ್ತನೆಗಳು ಸಿನಿಮಾಗಳಲ್ಲಿಯೂ ಕೃಷ್ಣ ಜಿ ರಾವ್ ನಟಿಸಿದ್ದರು.















