Coastal Bulletin

ಚೆನ್ನೈ: ಖ್ಯಾತ ತಮಿಳು ನಟ ವಿಕ್ರಮ್ ಶುಕ್ರವಾರ ಹೃದಯಾಘಾತದಿಂದ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಚಿಯಾನ್ ವಿಕ್ರಮ್ ಗೆ ವೈದ್ಯರು ಚಿಕಿತ್ಸೆ ನೀಡುತ್ತಿರುವುದಾಗಿ ವರದಿ ವಿವರಿಸಿದೆ.

ವಿಕ್ರಮ್ ಆರೋಗ್ಯದ ಕುರಿತಂತೆ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಲಾಗಿದೆ. ಮೂಲಗಳ ಪ್ರಕಾರ, ವಿಕ್ರಮ್ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ನಡೆಯುತ್ತಿದೆ ಎಂದು ತಿಳಿಸಿದೆ.

ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ವಿಕ್ರಮ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ

ಎಂದು ಮತ್ತೊಂದು ವರದಿ ತಿಳಿಸಿದೆ. ಇಂದು ಸಂಜೆ ಆರು ಗಂಟೆಗೆ ನಟ ವಿಕ್ರಮ್ ಅವರು ತಮ್ಮ ಮುಂಬರುವ ಪೊನ್ನಿಯಿನ್ ಸೆಲ್ವನ್ ಸಿನಿಮಾದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಬೇಕಿತ್ತು ಎಂದು ಮೂಲಗಳು ಹೇಳಿವೆ.

Leave a Comment