ಹಾನಗಲ್ ಕ್ಷೇತ್ರದ ಶಾಸಕ ಸಿ ಎಂ ಉದಾಸಿ ವಿಧಿವಶ
ಹಾನಗಲ್ ಕ್ಷೇತ್ರದ ಶಾಸಕ ಸಿ ಎಂ ಉದಾಸಿ ಇನ್ನಿಲ್ಲ
ಬೆಂಗಳೂರು : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಸಿ.ಎಂ ಉದಾಸಿ(77) ನಿಧನರಾಗಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.
ಕೆಲ ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ
ಸಿಲುಕಿದ್ದ ಸಿ.ಎಂ ಉದಾಸಿ ಅವರನ್ನು ಹೊಸೂರು ರಸ್ತೆಯಲ್ಲಿನ ನಾರಾಯಣ ಹೆಲ್ತ್ ಸಿಟಿಯಲ್ಲಿರುವ ಕಿರಣ್ ಮಜುಂದಾರ್ ಷಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋಸಹಜ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಸಿ.ಎಂ ಉದಾಸಿ ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.















