Coastal Bulletin

ಬಂಟ್ವಾಳ : ತೆಲಂಗಾಣದಿಂದ ಬಂಟ್ವಾಳ ಬಿಜೆಪಿ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ಉಳಿಪ್ಪಾಡಿಗುತ್ತು ಅವರು ಆಸ್ಪತ್ರೆಗೆ ಬೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಆದಿತ್ಯವಾರ ವಿಟ್ಲಪಡ್ನೂರು ಮಲರಾಯ ದೈವಸ್ಥಾನದ ಬಳಿ ಪಾದಾಯಾತ್ರೆಯ ಸಭಾ ಕಾರ್ಯಕ್ರಮ ಮುಗಿಸಿ ರಾತ್ರಿ ವಗೆನಾಡು ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ತಂಗಿದ್ದರು. ಆದರೆ ಇಂದು ಬೆಳಿಗ್ಗೆ ಪ್ರಚಾರದ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಾದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಶಾಸಕರು ತಂಗಿದ್ದ ಮನೆಯಿಂದ ನೇರವಾಗಿ ಆಸ್ಪತ್ರೆಗೆ ಬೇಟಿ ನೀಡಿದ್ದಾರೆ.

ಆದರೆ ಅದಾಗಲೇ ಗಂಭೀರ ವಾಗಿ ಗಾಯಗೊಂಡಿದ್ದ ಬೈಕ್ ಸಾವರ ವಿಜಿತ್ ಅವರು ಚಿಕಿತ್ಸೆ ಗೆ ಸ್ಪಂದಿಸಿದೆ ಮೃತಪಟ್ಟ ವಿಚಾರ

ತಿಳಿದು ವಿಷಾದ ವ್ಯಕ್ತಪಡಿಸಿದರು.

ಬಳಿಕ ಆಸ್ಪತ್ರೆಗೆ ಬಂದಿದ್ದ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ವಿಜಿತ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಲು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.

ಮುಂದಿನ ಶವಸಂಸ್ಕಾರಕ್ಕೆ ಸಂಬಂಧಿಸಿದಂತೆ ಶಾಸಕರು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ವಿಜಿತ್ ಅವರ ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ ಮೃತದೇಹವನ್ನು ಬೆಳ್ತಂಗಡಿ ಅವರ ನಿವಾಸಕ್ಕೆ ಕೊಂಡುಹೋಗಲಿದ್ದು, ಅದರ ಸಂಪೂರ್ಣ ಜವಾಬ್ದಾರಿಯನ್ನು ಬಿಜೆಪಿ ಮುಖಂಡ ಮಾದವ ಮಾವೆ, ಪ್ರಣಾಮ್ ಅಜ್ಜಿಬೆಟ್ಟು, ಯಶೋಧರ ಕರ್ಬೆಟ್ಟು, ವಸಂತ ಅಣ್ಣಳಿಕೆ ಅವರಿಗೆ ಶಾಸಕರು ವಹಿಸಿದ್ದಾರೆ.

Leave a Comment