ಮಂಗಳೂರು:ಉಳ್ಳಾಲದ ಮಾಜಿ ಶಾಸಕ,ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದ ತಂಡ ದಾಳಿ ನಡೆಸಿ ತನಿಖೆ ಆರಂಭಿಸಿದೆ.
25 ಮಂದಿಯನ್ನೊಳಗೊಂಡ ರಾಷ್ಟೀಯ ತನಿಖಾ ಸಂಸ್ಥೆಯ ತಂಡ ಮಂಗಳೂರಿನ ಸ್ಥಳೀಯ ಪೊಲೀಸರ ಕೂಡ ಭದ್ರತೆಯೊಂದಿಗೆ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದ್ದಾರೆ.
ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಎಂಬವರು ತಮ್ಮ ಕುಟುಂಬದ ಜೊತೆಗೆ ವಾಸವಿದ್ದಾರೆ.ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮಗಳು ನಾಪತ್ತೆಯಾಗಿದ್ದು ಐಸಿಸ್
ಸಂಘಟನೆ ಸೇರಿದ್ದಾಗಿ ಹೇಳಲಾಗಿತ್ತು.
ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು.ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜೊತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಇದ್ದು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ.















