ಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ 3 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ಘೋಷಿಸಿದೆ.
ಈ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿ “ಕೋವಿಡ್ ವೈರಸ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಮುಂದಿನ ವಾರದಲ್ಲಿ 3 ಲಕ್ಷ ರೂಪಾಯಿ ನೀಡಲಾಗುವುದು. ಅವರಿಗೆ 18 ವರ್ಷ ತುಂಬುವವರೆಗೆ ಪ್ರತಿ ತಿಂಗಳು 2000 ರೂಪಾಯಿಗಳನ್ನು ವೆಚ್ಚಕ್ಕಾಗಿ ಸರ್ಕಾರದಿಂದ ಭರಿಸಲಾಗುವುದು. ಇದರ
ಜೊತೆಗೆ ಅವರು ಪದವಿ ಪಡೆಯುವವರೆಗೂ ಈ ಮಕ್ಕಳ ಶಿಕ್ಷಣದ ವೆಚ್ಚವನ್ನು ಸರ್ಕಾರ ನೋಡಿಕೊಳ್ಳುತ್ತದೆ. ಈ ಯೋಜನೆಗೆ 3.20 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.
ಕೊರೊನಾ ವೈರಸ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.















