Coastal Bulletin

ತಿರುವನಂತಪುರಂ: ಅಫ್ಘಾನಿಸ್ತಾನದಿಂದ ಕೇರಳಿಗರು ಒಳಗೊಂಡಂತೆ ಭಾರತೀಯರನ್ನು ಸ್ವದೇಶಕ್ಕೆ ಕರೆಸಿಕೊಂಡಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯ ಶ್ಲಾಘನೀಯ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿರುವ ವಿಜಯನ್, ನೆರವಿನ ಅಗತ್ಯವಿರುವ ಕೇರಳಿಗರು

Norka roots ಸಂಪರ್ಕಿಸಬಹುದೆಂದು ಅವರು ಹೇಳಿದ್ದಾರೆ.

ಭಾನುವಾರ ಇಬ್ಬರು ಆಫ್ಘನ್ ಶಾಸಕರು ಸೇರಿದಂತೆ ಸುಮಾರು 400 ಜನರನ್ನು ಕಾಬೂಲ್ ನಿಂದ ಭಾರತಕ್ಕೆ ಕರೆತರಲಾಗಿದೆ.

Leave a Comment