Coastal Bulletin

ಮಂಗಳೂರು:ಕೋವಿಡ್ ಸೋಂಕಿಗೊಳಗಾದ ದಂಪತಿಗಳು ಡೆತ್‌ನೋಟ್‌ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಕಂಪಾಡಿ ಚಿತ್ರಾಪುರದಲ್ಲಿ ನಡೆದಿದೆ.

ಚಿತ್ರಾಪುರ ಬೈಕಂಪಾಡಿ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು.

ಆತ್ಮಹತ್ಯೆಗೆ ಮುನ್ನ ಆರ್ಯ ಸುವರ್ಣ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್‌ಗೆ ವಾಯ್ಸ್ ಮೆಸೇಜ್ ಕಳಿಸಿದ್ದು, ‘ದಂಪತಿಗಳಾದ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ಹೇಳಿದ್ದರು. ಇದಕ್ಕೆ ಕಮಿಷನರ್ ಕೂಡಲೇ ಪ್ರತಿಕ್ರಿಯೆ ನೀಡಿ ‘ಆತ್ಮಹತ್ಯೆಯಂತ ದುಸ್ಸಾಹಸ ಮಾಡಬೇಡಿ. ನಿಮ್ಮ ಏನೇ ಕಷ್ಟವಿದ್ದರೂ ನಾನು ಸ್ಪಂದಿಸುತ್ತೇನೆ. ದಯವಿಟ್ಟು ಆತ್ಮಹತ್ಯೆ ಮಾಡಬೇಡಿ’

ಎಂದು ವಿನಂತಿ ಮಾಡಿದ್ದಾರೆ. ಕೂಡಲೇ ಎಲ್ಲ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿ ದಂಪತಿ ರಕ್ಷಣೆಗೆ ಆಗ್ರಹಿಸಿದ್ದಾರೆ. ದಂಪತಿ ಮಾಹಿತಿ ಪಡೆದ ಸುರತ್ಕಲ್ ಪೊಲೀಸರು ಅಪಾರ್ಟ್‌ಮೆಂಟ್‌ಗೆ ಹೋದಾಗ ದಂಪತಿ ಆತ್ಮಹತ್ಯೆಗೈದಿರುವುದು ಕಂಡು ಬಂದಿದೆ.

ಮೂಲತಃ ಪಡುಬಿದ್ರಿ ನಿವಾಸಿಗಳಾದ ಆರ್ಯ ಸುವರ್ಣ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಗುಣ ಆರ್. ಸುವರ್ಣ ಡೆತ್ ನೋಟ್ ಬರೆದಿದ್ದು ಅದರಲ್ಲಿ ತಾವು ಆತ್ಮಹತ್ಯೆ ಮಾಡಲು ಕಾರಣವನ್ನು ಬರೆದಿದ್ದಾರೆ.

Leave a Comment