ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರು ನ್ಯಾಯಾಲಯ ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಹಾರಿದ ಆರೋಪಿಯೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.ತಲಪಾಡಿ ಕಿನ್ಯ ನಿವಾಸಿ ರವಿರಾಜ್ (32) ಕೋರ್ಟ್ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ತೊಕ್ಕೊಟ್ಟಿನ ಸೆಬಾಸ್ಟಿಯನ್ ಕಾಲೇಜು ಬಳಿ ಅಪ್ರಾಪ್ತ ಹುಡುಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರು ಬಂಧಿಸಿ ಈತನನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತಂದಿದ್ದರು. ಈ ಸಂದರ್ಭ ಆರೋಪಿ ಪೊಲೀಸರ ಕಣ್ತಪ್ಪಿಸಿ ಕಟ್ಟಡದ
ಆರನೇ ಮಹಡಿಯಿಂದ ಕೆಳಗೆ ಹಾರಿದ್ದಾನೆ. ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.















