Coastal Bulletin

ಜಮ್ಮು ಮತ್ತು ಕಾಶ್ಮೀರದ ಸಪೋರ್ ನಲ್ಲಿ ಭಾರತೀಯ ಸೇನೆ ನಡೆಸಿದ ಎನ್ಕೌಂಟರ್ ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.

ಸೊಪೋರ್ ನ ಪೆತ್ಸೀರ್ ಎಂಬಲ್ಲಿ ಉಗ್ರರು ಅಡಗಿರುವ ಖಚಿತ  ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದರು ಈ ವೇಳೆ ಉಗ್ರರು ಸೇನಾಪಡೆಯ ಮೇಲೆ  ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.ಪ್ರತಿದಾಳಿ ನಡೆಸಿದ ಭಾರತೀಯ ಭದ್ರತಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಸ್ಥಳದಲ್ಲಿ ಭಾರೀ

ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.


ಕಾಶ್ಮೀರದ ಐಜಿಪಿ ವಿಜಯ್‌ ಕುಮಾರ್ ಅವರು ಮಾಹಿತಿ ನೀಡಿ 'ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭದ್ರತಾ ಪಡೆಗಳ ಸಹಾಯದಿಂದ ಕಾಶ್ಮೀರ ವಿಭಾಗದಲ್ಲಿ ಈ ವರ್ಷ 100 ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಲಾಗಿದೆ’ ಎಂದರು.



Leave a Comment