Coastal Bulletin

ಉಡುಪಿ:ಕೋವಿಡ್ ಹಿನ್ನೆಲೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇನ್ನು ಮುಂದೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪಿ.ಬಿ. ಮಹೇಶ್ ಕೋವಿಡ್-19 ಹಿನ್ನೆಲೆಯಲ್ಲಿ ಪ್ರಸ್ತುತ ವಿದ್ಯಾಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇದೀಗ ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ ಸೆಪ್ಟಂಬರ್ 4 ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ನಿಯಮವು ಜಾರಿಯಲ್ಲಿರಲಿದೆ. ದೇವಾಲಯ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾದಿಗಳ ಆಧಾರ್

ಕಾರ್ಡ್  ಪರಿಶೀಲಿಸಿ ಹೆಸರು, ಊರು ಹಾಗೂ ದೂರವಾಣಿ ಸಂಖ್ಯೆಯನ್ನು ದಾಖಲಿಸಬೇಕು.

ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು ದೇವಸ್ಥಾನ ಪ್ರವೇಶಿಸುವ 72 ಗಂಟೆಗಳ ಒಳಗೆ ಮಾಡಿಸಿರುವಂತಹ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಕೂಡ ಹಾಜರುಪಡಿಸುವುದು ಕಡ್ಡಾಯವಾಗಿದೆ. ಅಲ್ಲದೆ ಮೂಕಾಂಬಿಕಾ ಕ್ಷೇತ್ರದಲ್ಲಿ ಸಾಮಾಜಿಕ ಅಂತರವನ್ನು ಕೂಡ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Comment