Coastal Bulletin

ಡ್ರಗ್ಸ್ ಕೇಸಿನಲ್ಲಿ ನಟಿ, ಆ್ಯಂಕರ್ ಅನುಶ್ರೀ ಚಾರ್ಜ್‌ಶೀಟ್ ವಿಚಾರವಾಗಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು  ಪ್ರಕರಣದ A2 ಆರೋಪಿ ಕಿಶೋರ್ ಅಮನ್ ಡ್ರಗ್ ಕೇಸ್ ಚಾರ್ಜ್‌ಶೀಟ್ ಸಲ್ಲಿಕೆ ವಿಚಾರವಾಗಿ ಯಾವುದೇ ಆರೋಪಗಳಿದ್ದರೆ ವಕೀಲರ ಮೂಲಕ ಕೋರ್ಟ್‌ಗೆ ಹೇಳಬಹುದು ಎಂದಿದ್ದಾರೆ.

ಜಾರ್ಜ್‌ಶೀಟಿನಲ್ಲಿ ಅನುಶ್ರೀ ಆರೋಪಿ ಎಂದು ಉಲ್ಲೇಖ ಆಗಿಲ್ಲ. ಕಿಶೋರ್ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ. ಕಿಶೋರ್ ಅಮನ್ ಮತ್ತೆ ಕರೆದು ವಿಚಾರಣೆ ನಡೆಸುವ ಅಗತ್ಯವಿಲ್ಲ. ಪ್ರಕರಣದ ಸಂಪೂರ್ಣ ತನಿಖೆ ಪೂರ್ತಿ ಮಾಡಿಯೇ ಚಾರ್ಜ್‌ಶೀಟ್ ಸಲ್ಲಿಸಿದ್ದೇವೆ ಎಂದಿದ್ದಾರೆ.


ಒಂಭತ್ತು

ತಿಂಗಳ ಹಿಂದೆಯೇ ಅಂತಿಮ ವರದಿ ಸಲ್ಲಿಸಿದ್ದೇವೆ. ಈಗ ಯಾಕೆ ಈ ವಿಚಾರ ಸುದ್ದಿಯಾಯಿತು ಗೊತ್ತಿಲ್ಲ ಎಂದಿದ್ದಾರೆ. ಅನುಶ್ರೀ ಮೇಲಿರುವ ಆರೋಪಕ್ಕೆ ಪೂರಕ ಸಾಕ್ಷಿಗಳು ಲಭ್ಯವಾಗಿಲ್ಲ. ಆರು ಜನ ಆರೋಪಿಗಳ ಮೇಲೆ ಅಂತಿಮ ವರದಿ ಸಲ್ಲಿಸಿದ್ದೇವೆ. ಐದು ಜನ ಆರೋಪಿಗಳಿಗೆ ಜಾಮೀನು ಆಗಿದ್ದು, ಒಬ್ಬ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. 2020 ರ ಸೆಪ್ಟೆಂಬರ್ 19 ಕ್ಕೆ ಪ್ರಕರಣ ದಾಖಲಾಗಿತ್ತು. ಅದೇ ವರ್ಷ ಡಿಸೆಂಬರ್ 11 ಅಂತಿಮ ವರದಿ ಸಲ್ಲಿಸಿದ್ದೇವೆ ಎಂದು ವಿವರಿಸಿದ್ದಾರೆ..

Leave a Comment