Coastal Bulletin

ನಟಿ, ಆಂಕರ್​ ಅನುಶ್ರಿಗೆ ಮತ್ತೆ ಕಂಟಕ ಎದುರಾಗಿದೆ.ಡ್ರಗ್ಸ್​ ಕೇಸ್​ ವಿಚಾರ ಸಂಬಂಧಪಟ್ಟಂತೆ ಸಿಸಿಬಿ ಸಲ್ಲಿಸಿರುವ ಚಾರ್ಜ್​ಶೀಟ್​ನಲ್ಲಿ ಅನುಶ್ರಿ ಹೆಸರು ಉಲ್ಲೇಖವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂಕರ್ ಅನುಶ್ರೀ ಡ್ರಗ್ಸ್ ಸೇವನೆ ಜತೆಗೆ ಅದರ ಸಾಗಾಟ ಮಾಡುತ್ತಿದ್ದರು ಎಂದು ಪ್ರಕರಣದ ಎ2 ಆರೋಪಿಯಾಗಿರುವ ಕಿಶೋರ್​ ಅಮನ್​ ಶೆಟ್ಟಿ ಹೇಳಿಕೆಯನ್ನು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ಕಿಶೋರ್ ಶೆಟ್ಟಿ ನೀಡಿರುವ ಹೇಳಿಕೆಯಂತೆ, ಅವರ ರೂಮ್​ಗೆ ಅನುಶ್ರೀ ಡ್ರಗ್ಸ್​ ತರುತ್ತಿದ್ದರು. ಕಿಶೋರ್, ತರುಣ್ ಜೊತೆ ಸಾಕಷ್ಟು ಬಾರಿ ಅನುಶ್ರೀ ಕೂಡ ಡ್ರಗ್ಸ್​ ಸೇವನೆ ಮಾಡಿದ್ದರು ಎಂದು ಹೇಳಿಕೆಯಲ್ಲಿ ದಾಖಲಿಸಲಾಗಿದೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್​ಶೀಟ್​ನಲ್ಲಿ ಎ2 ಕಿಶೋರ್ ಶೆಟ್ಟಿಯನ್ನು ಉಲ್ಲೇಖಿಸಲಾಗಿದೆ. ‘ರಿಯಾಲಿಟಿ ಶೋನ

ಕೊರಿಯೋಗ್ರಾಫರ್​ ಆಗಿದ್ದ ತರುಣ್​ ಮುಖಾಂತರ ತನಗೆ ಅನುಶ್ರೀ ಪರಿಚಯವಾಗಿತ್ತು. ತರುಣ್​ ರೂಮ್​ನಲ್ಲಿ ತಡರಾತ್ರಿವರೆಗೂ ಅನುಶ್ರೀಗೆ ಡ್ಯಾನ್ಸ್ ಪ್ರಾಕ್ಟೀಸ್ ಮಾಡಿಸುತ್ತಿದ್ದೆವು. ಡ್ಯಾನ್ಸ್ ಪ್ರಾಕ್ಟೀಸ್​ಗೆ ಬರುವಾಗ ಅನುಶ್ರೀ ಎಕ್ಸ್‌ಟಸಿ ಡ್ರಗ್ಸ್​ ಖರೀದಿಸಿ ತರುತ್ತಿದ್ದರು. ನಮಗೆ ಎಕ್ಸ್‌ಟಸಿ ಡ್ರಗ್ಸ್ ನೀಡಿ ಅನುಶ್ರೀ ಕೂಡ ಸೇವಿಸುತ್ತಿದ್ದರು. ಅನುಶ್ರೀಗೆ ಡ್ರಗ್ಸ್ ಪೆಡ್ಲರ್​ಗಳ ಪರಿಚಯವಿದೆ. ಡ್ರಗ್ಸ್ ಎಲ್ಲಿ ಸಿಗುತ್ತೆ, ಯಾರು ಪೂರೈಸುತ್ತಾರೆಂದು ಆಕೆಗೆ ಗೊತ್ತಿತ್ತು. ಡ್ರಗ್ಸ್​ ಅಷ್ಟು ಸುಲಭವಾಗಿ ಅನುಶ್ರೀಗೆ ಹೇಗೆ ಸಿಗುತ್ತಿತ್ತೋ ಗೊತ್ತಿಲ್ಲ’ ಎಂದು ಚಾರ್ಜ್​ಶೀಟ್​​ನಲ್ಲಿ ಎ2 ಕಿಶೋರ್​ ಶೆಟ್ಟಿ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. 




Leave a Comment