ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್‌ವುಡ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಹೊರಬಿದ್ದಿದ್ದೆ.ಈ ಹಿಂದೆ ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟಿ ರಾಗಿಣಿ, ಸಂಜನಾ ಸೇರಿದಂತೆ ಹಲವರು ಡ್ರಗ್ಸ್ ಸೇವಿಸಿರುವುದು ಎಫ್ ಎಸ್ ಎಲ್ ವರದಿಯಿಂದ ದೃಡಪಟ್ಟಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಗಿಣಿ ಮತ್ತು ಸಂಜನಾ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.ಸಿಸಿಬಿ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದು, ನಟಿಯರ ಕೂದಲು ಸೇರಿದ ವಿವಿಧ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್
ಪರೀಕ್ಷೆಗೆ ಕಳಿಸಲಾಗಿತ್ತು. ಸ್ಯಾಂಪಲ್ ಪರೀಕ್ಷೆಯಲ್ಲಿ ಇವರು ಡ್ರಗ್ ಸೇವಿಸಿರುವುದು ದೃಢಪಟ್ಟಿದೆ.10 ತಿಂಗಳ ನಂತರ ಹೈದರಾಬಾದ್ ಎಫ್‌ಎಸ್‌ಎಲ್ ಕೇಂದ್ರದಿಂದ ರಿಪೋರ್ಟ್ ಬಂದಿದ್ದು, ಆರೋಪ ಸಾಬೀತಾಗಿರುವುದರಿಂದ ನಟಿಯರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.














