ಸ್ಯಾಂಡಲ್ ವುಡ್ ಗೆ ಮಾದಕ ಜಾಲ ನಂಟು ಪ್ರಕರಣದಡಿಯಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ನಟಿ ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ದೃಡಪಟ್ಟ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಜನಾ ತಾಯಿ ರೇಷ್ಮಾ , 'ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಮಾನಸಿಕವಾಗಿ ಕುಗ್ಗಿದ್ದಾಳೆ.ಅನಾರೋಗ್ಯದ ಕಾರಣ ಆಕೆಯನ್ನು ತಡರಾತ್ರಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ನಾವು ದೇವರನ್ನು ನಂಬಿದ್ದೇವೆ. ನನ್ನ ಮಗಳು ಯಾವುದೇ ತಪ್ಪನ್ನೂ ಮಾಡಿಲ್ಲ. ಆದರೆ ದುರಾದೃಷ್ಟದಿಂದ ಈ ರೀತಿಯೆಲ್ಲ ಆಗುತ್ತಿದೆ. ಆಕೆಗಾಗಿ ನಾನು ದೇವರಲ್ಲಿ ಪ್ರಾರ್ಥಿಸುತ್ತಿದ್ದೇನೆ' ಎಂದು ಹೇಳಿದ್ದಾರೆ.
2020ರ ಸೆಪ್ಟೆಂಬರ್
ತಿಂಗಳಲ್ಲಿ ಮಾದಕ ದ್ರವ್ಯ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ವಿರೇನ್ ಖನ್ನಾ, ರವಿಶಂಕರ್ ಲಸೇರಿದಂತೆ ಒಟ್ಟು 16 ಮಂದಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಇವರು ಡ್ರಗ್ಸ್ ಸೇವನೆ ಮಾಡುತ್ತಿದ್ದರೋ ಎಂಬುದನ್ನು ಖಚಿತಪಡಿಸಿಕೊಳ್ಳಲು ತಲೆಗೂದಲನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಈ ವರದಿಯಲ್ಲಿ ಸಂಜನಾ, ರಾಗಿಣಿ ಸೇರಿದಂತೆ 12 ಮಂದಿ ಆರೋಪಿಗಳು ಡ್ರಗ್ ಸೇವನೆ ಮಾಡಿರೋದು ದೃಢಪಟ್ಟಿತ್ತು.














