ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ದೇಶದ ನಿರೀಕ್ಷೆಯಂತೆ ನೀರಜ್ ಚೋಪ್ರಾ ಚಿನ್ನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.ಬರೋಬ್ಬರಿ 87.65 ಮೀ ದೂರ ಎಸೆಯುವ ಮೂಲಕ ಭಾರತಕ್ಕೆ ಮೊದಲ ಚಿನ್ನ ತಂದು ಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.
ನೀರಜ್‌ಗಿಂತ ಮೊದಲು ಯಾರೂ ಭಾರತಕ್ಕೆ ಅಥ್ಲೆಟಿಕ್ಸ್‌ನಲ್ಲಿ ಪದಕ ಗೆದ್ದಿರಲಿಲ್ಲ. ಅದೇ ಸಮಯದಲ್ಲಿ, ಅವರು ಒಲಿಂಪಿಕ್ಸ್‌ನಲ್ಲಿ ಸಿಂಗಲ್ಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10ಮೀ ಏರ್ ರೈಫಲ್ ವಿಭಾಗದಲ್ಲಿ ಭಾರತದ ಅಭಿನವ್ ಬಿಂದ್ರಾ ಚಿನ್ನ ಗೆದ್ದದ್ದೆ ಭಾರತಕ್ಕೆ
ಕಡೆಯ ಚಿನ್ನವಾಗಿತ್ತು.
ಮೊದಲ ಪ್ರಯತ್ನದಲ್ಲಿಯೇ 87.03 ಮೀಟರ್ ಎಸೆದ ಅವರು ಎರಡನೇ ಪ್ರಯತ್ನದಲ್ಲಿ 87.65 ಮೀ ದೂರ ಎಸೆದು ದಾಖಲೆ ನಿರ್ಮಿಸಿದರು. ಅಂತಿಮ ಪ್ರಯತ್ನದಲ್ಲಿ 75 ಮೀಟರ್ ಮಾತ್ರ ಎಸೆದರು. ಆ ಮೂಲಕ ಅತಿ ದೂರ ಎಸೆದು ಮೊದಲಿಗರಾಗಿದ್ದಾರೆ.















