ಬೆಂಗಳೂರು: ಐಸಿಸ್ ಉಗ್ರ ಸಂಘಟನೆಯ ಜೊತೆ ಸಂಪರ್ಕ ಹೊಂದಿರುವ ಶಂಕೆಯ ಮೇಲೆ ಮಂಗಳೂರಿನ ಉಳ್ಳಾಲ ಮಾಜಿ ಶಾಸಕ,ಖ್ಯಾತ ಸಾಹಿತಿ ಬಿ.ಎಂ.ಇದಿನಬ್ಬ ಅವರ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ ಸೇರಿದಂತೆ ನಾಲ್ಕು ಮಂದಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ಅಮ್ಮರ್ ಅಬ್ದುಲ್ ರೆಹಮಾನ್ ಜತೆ,ಬೆಂಗಳೂರಿನ ಶಂಕರ್ ವೆಂಕಟೇಶ್ ಪೆರುಮಾಳ್ ಅಲಿಯಾಸ್ ಅಲಿ ಮೌವಿಯಾ, ಕಾಶ್ಮೀರದ ಶ್ರೀನಗರದ ಒಬೈದ್ ಹಮೀದ್ ಮತ್ತು ಬಂಡಿಪೋರದ ಮುಝಾಮಿಲ್ ಹಸನ್ ಬಟ್ ನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮಂಗಳೂರು,ಬೆಂಗಳೂರು ಹಾಗೂ ಜಮ್ಮು-ಕಾಶ್ಮೀರದಲ್ಲಿ ಬುಧವಾರ ಏಕಕಾಲಕ್ಕೆ ದಾಳಿ ನಡೆಸಿ ಇವರಿಂದ ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಅನೇಕ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಕೇರಳದ ಉಗ್ರ ಮಹಮ್ಮದ್ ಅಮೀನ್ ಜೊತೆಗೆ ಇವರು ಸಂಪರ್ಕ ಹೊಂದಿರುವ
ಇವರೆಲ್ಲಾ ಸಿರಿಯಾ ಮೂಲದ ಇಸ್ಲಾಮಿಕ್ ಸ್ಟೇಟ್(ಐಸಿಸ್) ಉಗ್ರ ಸಂಘಟನೆಗೆ ಯುವಕರ ನೇಮಕಾತಿ ನಡೆಸುತ್ತಿದ್ದರು ಎಂಬ ಶಂಕೆ ವ್ಯಕ್ತವಾಗಿದ್ದು ಕರ್ನಾಟಕ ಮತ್ತು ಕೇರಳದ ಪ್ರಭಾವಿಗಳ ಕೊಲೆಗೆ ಸ್ಕೆಚ್ ಹಾಕಿರುವುದು ಕೂಡ ತನಿಖೆಯಿಂದ ತಿಳಿದುಬಂದಿದೆ.
ಇದಿನಬ್ಬ ಅವರ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ ಮಡಿಕೇರಿಯ ದೀಪ್ತಿ ಮಾರ್ಲ ಎಂಬವರ ಜತೆ ಮದುವೆ ಮಾಡಿಕೊಂಡು ನಂತರ ಹೆಸರನ್ನು ಅವಳ ಹೆಸರನ್ನು ಮರಿಯಾ ಎಂದು ಬದಲಾಯಿಸಿದ್ದ ಎಂದು ತಿಳಿದು ಬಂದಿದೆ.















