ಬೆಂಗಳೂರು:ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸಲು ಸರ್ಕಾರ ಹಸಿರು ನಿಶಾನೆ ತೋರಿದೆ.ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕರೊನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇದೇ 23ರಿಂದ ಮೊದಲ ಹಂತದಲ್ಲಿ 9,10,11 ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. 2ನೇ ಹಂತದಲ್ಲಿ 6, 7 ಮತ್ತು 8ನೇ ತರಗತಿ ಆರಂಭಿಸಲಾಗುವುದು. ಕರೊನಾ ಸ್ಥಿತಿಗತಿಗಳನ್ನು ಅವಲೋಕಿಸಿ ಆಗಸ್ಟ್ ಕೊನೆಯ ವಾರದಲ್ಲಿ ಒಂದರಿಂದ 8ನೇ ತರಗತಿಗಳ ಬಗ್ಗೆ ನಿರ್ಧಾರ ಮಾಡಲಾಗುವುದು,ದಿನ ಬಿಟ್ಟು ದಿನ ತರಗತಿಗಳು ನಡೆಸಲು ಒಪ್ಪಿಗೆ ಸಿಕ್ಕಿದ್ದು, ವಿವರ
ಮಾರ್ಗಸೂಚಿ ಇಂದೇ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ನಿಯಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿ ಮಾಡಲಾಗುವುದು. ರಾಜ್ಯಾದ್ಯಂತ ನೈಟ್ ಕರ್ಪ್ಯೂ ಅವಧಿ ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಾಗಲಿದೆ ಎಂದರು.















