ಮೈಸೂರು: ಐದು ರೂಪಾಯಿ ನಾಣ್ಯ ನುಂಗಿದ್ದ 4 ವರ್ಷದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ.ಖುಷಿ ಮೃತ ಬಾಲಕಿ.
ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದ ಖುಷಿ, ನಾಣ್ಯದೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನಾಣ್ಯವನ್ನು ನುಂಗಿದ್ದಳು. ತಕ್ಷಣವೇ ಪೋಷಕರು ಮಗುವಿಗೆ ಮೊದಲು ಸ್ಥಳೀಯ
ಆಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದೆ.















