Coastal Bulletin

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ 'ರಾಜೀವ್ ಗಾಂಧಿ ಖೇಲ್ ರತ್ನ' ಪ್ರಶಸ್ತಿಗೆ 'ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ' ಎಂದು ಘೋಷಣೆ ಮಾಡಿದ್ದಾರೆ. ಇದರ ಬಗ್ಗೆ ದೇಶದಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಹೆಸರುಗಳ ಬದಲಾವಣೆ ಬಿಜೆಪಿ ನಾಯಕರು ಮುಂದಾಗಿದ್ದಾರೆ. 'ಇಂದಿರಾ ಕ್ಯಾಂಟೀನ್' ಹೆಸರನ್ನು ಎಂದು ಬದಲಾಯಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಸಿಟಿ ರವಿಯವರು ಇಂದು ಟ್ವೀಟ್ ಮಾಡಿದ್ದು ಆದಷ್ಟು ಬೇಗ ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾವಣೆ  ಮಾಡಬೇಕು ಎಂದು‌ ಸಿಎಂ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದಾರೆ.

style="width: 268px;" data-filename="ct-ravi.jpg">

ಕನ್ನಡಿಗರು ಊಟ ಮಾಡುವ ವೇಳೆ ಇಂದಿರಾ ಗಾಂಧಿಯವರ ಹೆಸರಿನ ಮೂಲಕ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ನೆನಪಿಸುವ ಅಗತ್ಯ ಇಲ್ಲ.ಮುಖ್ಯಮಂತ್ರಿಯವರು ಆದಷ್ಟು ಬೇಗ ಕ್ರಮ‌ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Leave a Comment