Coastal Bulletin

ಬೆಂಗಳೂರು: ಕೇರಳದಿಂದ ಕರ್ನಾಟಕಕ್ಕೆ ಕೊರೋನಾ ಭೀತಿ ಜೊತೆಗೆ ಇದೀಗ ಮಾರಕ ನಿಪಾ ವೈರಸ್ ಆತಂಕ ಶುರುವಾಗಿದೆ.ಇದರಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಕೇರಳದಿಂದ ಕರ್ನಾಟಕಕ್ಕೆ ಅಕ್ಟೋಬರ್ ಅಂತ್ಯದವರೆಗೂ ಆಗಮಿಸದಂತೆ ಮನವಿ ಮಾಡಿದೆ.

ವಿದ್ಯಾರ್ಥಿಗಳು, ಉದ್ಯೋಗಿಗಳು ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣ ಮುಂದೂಡುವಂತೆ ಸರ್ಕಾರ ತಿಳಿಸಿದೆ.

ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆಗಳು, ನರ್ಸಿಂಗ್ ಹೋಮ್, ಕಾರ್ಖಾನೆ, ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚನೆ

ರವಾನಿಸಿದೆ.

ಜೊತೆಗೆ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳು ಹೈ ಅಲರ್ಟ್ ಆಗಿರಲು ರಾಜ್ಯದ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ .

Leave a Comment