ಮೈಸೂರಿನಂತಹ ನಗರದಲ್ಲಿ ಅತ್ಯಾಚಾರ ಪ್ರಕರಣ ನಡೆದು 24 ಗಂಟೆಗೂ ಅಧಿಕ ಸಮಯ ಕಳೆದಿದ್ದರೂ ಆರೋಪಿಗಳನ್ನು ಬಂಧಿಸಲಾಗದ್ದು ಬಿಜೆಪಿ ಆಡಳಿತದಲ್ಲಿ ಗೃಹ ಇಲಾಖೆಯ ಕಾರ್ಯಕ್ಷಮತೆ ಕುಸಿದಿರುವುದಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಇದುವರೆಗೂ ಗೃಹಸಚಿವರು, ಬಿಜೆಪಿಯ ಮಹಿಳಾ ನಾಯಕಿಯರು ಸಂತ್ರಸ್ತೆಯನ್ನು ಭೇಟಿಯಾಗದಿರುವುದು ಬಿಜೆಪಿಯ ನಿರ್ಲಕ್ಷ್ಯ ಧೋರಣೆಗೆ ನಿದರ್ಶನ.ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆಗೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ.
ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿದ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ! ಸವದಿಯನ್ನ ರಕ್ಷಿಸಿದ ಮಹಿಳಾ ವಿರೋಧಿ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ ಎಂದು ಟ್ವೀಟ್ ಮಾಡಿದೆ.














