Coastal Bulletin

ಅತ್ಯಾಚಾರ ಆಗಿರೋದು ಮೈಸೂರಿನಲ್ಲಿ, ಕಾಂಗ್ರೆಸ್ ನವರು ನನ್ನನ್ನು ರೇಪ್ ಮಾಡ್ತಿದ್ದಾರೆ, ರಾಜಕೀಯ ಲಾಭ ಪಡೆಯಲು ಪ್ರಯತ್ನ ಮಾಡ್ತಾ ಇದ್ದಾರೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಗೃಹಸಚಿವರು ಇದೊಂದು ಅಮಾನುಷ ಕೆಲಸ. ಅದನ್ನು ಮಾನವೀಯ ದೃಷ್ಟಿಯಿಂದ ನೋಡಬೇಕು.ಕಾಂಗ್ರೆಸಿನವರು ಅತ್ಯಾಚಾರ ಪ್ರಕರಣದಲ್ಲಿಯೂ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ.

 ಯುವಕ,

ಯುವತಿ ಸಂಜೆ 7.30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು. ಆದರೆ, ಹಾಗೆಂದು ಹೇಳುವುದಕ್ಕೂ ಆಗುವುದಿಲ್ಲ. ಈಗಂತೂ ಇಬ್ಬರೂ ಶಾಕ್ ನಲ್ಲಿದ್ದಾರೆ. ಪೂರ್ತಿ ಹೇಳಿಕೆ ಪಡೆಯೋದಕ್ಕೂ ಆಗಿಲ್ಲ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ ಹೇಳಿದರು.

Leave a Comment