Coastal Bulletin

ಬೆಂಗಳೂರು : ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಆದೇಶ ಹೊರಡಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹೂಗೂಚ್ಛ ನೀಡಲು ಮುಂದಾದಾಗ ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ ಎಂದು

ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಅವರ ಮೌಖಿಕ ಆದೇಶದ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಇನ್ಮುಂದೆ ಸಭೆ ಸಮಾರಂಭಗಳಲ್ಲಿ ಹಾರ, ಹೂಗುಚ್ಛ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ ಸರ್ಕಾರಿ ಆದೇಶ ಜಾರಿ ಮಾಡಿದ್ದಾರೆ.

Leave a Comment