Coastal Bulletin

ಮಂಗಳೂರು: ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ದ.ಕ‌. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ಸಿಎಂ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಶಾ ಕಾರ್ಯಕರ್ತರು,ಅರೋಗ್ಯ ಕಾರ್ಯಕರ್ತರಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಗ್ಲೌಸ್ ಕೊರತೆ ಇದೆ ಎಂದು ಶಾಸಕ ಯು.ಟಿ. ಖಾದರ್ ಮುಖ್ಯಮಂತ್ರಿಯವರ ಗಮನಕ್ಕೆ ತಂದರು.

ಇದಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್,ಪ್ರತಿಕ್ರಿಯೆ ನೀಡಿ ಪಿಪಿಇ ಕಿಟ್ ಕೊರತೆ ಇಲ್ಲ,ಗ್ಲೌಸ್ ಮತ್ತು ಎನ್95 ಮಾಸ್ಕ್ ಕೊರತೆ ಇದ್ದು ಪೂರೈಕೆಗೆ ಕ್ರಮ ವಹಿಸಲಾಗಿದೆ ಎಂದರು.

ಇದರಿಂದ ಅಸಮಾಧಾನಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ತರಾಟೆಗೆ ತೆಗೆದುಕೊಂಡರು.

'ಮಾಸ್ಕ್, ಗ್ಲೌಸ್ ಇಲ್ಲದೇ ಏನ್ ಆಡಳಿತ ಮಾಡ್ತೀರಾ ಇಲ್ಲಿ? ಅಷ್ಟು ಕಾಮನ್ ಸೆನ್ಸ್ ಇಲ್ಲದೇ ಏನ್ರೀ ಮಾಡ್ತೀರಾ ನೀವು ಇಲ್ಲಿ? ಎಂದು ಪ್ರಶ್ನಿಸಿದ ಸಿಎಂ,ಎಸ್ ಡಿಆರ್ ಎಫ್

ಫಂಡ್ ಅದು, ಇದು ಪಡೆದು ಇವತ್ತೇ ಖರೀದಿ ಮಾಡಿ. ಬೆಂಗಳೂರು ಬಿಟ್ಟು ಎಲ್ಲವನ್ನೂ ಇಲ್ಲೇ ಖರೀದಿಸಿ. ಸಂಜೆ ನನಗೆ ರಿಪೋರ್ಟ್ ಮಾಡಿ ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು'.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಅವರಿಗೆ ಸಿಎಂ ಬೊಮ್ಮಾಯಿ ಕ್ಲಾಸ್

'ಏನಯ್ಯ, ನೀನ್ ಏನ್ ಮಾಡ್ತಾ ಇದೀಯ ಇಲ್ಲಿ ಅಂತ ಹೇಳು. ನಿನ್ನತ್ರ ಏನು ಸಮಸ್ಯೆ ಇದೆ ಅಂತ ಡಿಸಿ ಗಮನಕ್ಕೆ ತರೋಕೆ ಗೊತ್ತಿಲ್ವಾ? ಮೋಸ್ಟ್ ಸೀನಿಯರ್ ಹೆಲ್ತ್ ಆಫೀಸರ್ ಆಗಿದ್ರೂ ನೀನ್ ಏನ್ ನಿದ್ದೆ ಮಾಡ್ತಾ ಇದೀಯಾ? ಮಾಸ್ಕ್, ಗ್ಲೌಸ್ ಎಷ್ಟು ಕೊರತೆ ಇದೆ ಅನ್ನೋದು ಲೆಕ್ಕ ಇಡೋಕೆ ಆಗಲ್ವಾ ನಿಂಗೆ. ನಿಮ್ಮ ಯಾವುದೇ ಸಮರ್ಥನೆ ನಂಗೆ ಬೇಡ, ಸಂಜೆಯೊಳಗೆ ನಂಗೆ ರಿಪೋರ್ಟ್ ಕೊಡಿ' ಎಂದು ಮುಖ್ಯಮಂತ್ರಿ ಗರಂ ಆದರು





Leave a Comment