ಬೆಂಗಳೂರು:ರಾಜ್ಯದಲ್ಲಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಯ ಕಾರ್ಯಕರ್ತರ ಮೇಲೆ ಹಾಕಲಾಗಿದ್ದ ಸುಳ್ಳು ಮೊಕದ್ದಮೆಗಳನ್ನು ವಜಾಗೊಳಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಸಚಿವರು ಮನವಿ ಸಲ್ಲಿಸಿದ್ದಾರೆ.
'ಕರಾವಳಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳೂ ಸೇರಿದಂತೆ ರಾಜ್ಯದಾದ್ಯಂತ ಅನೇಕ ಕಡೆಗಳಲ್ಲಿ (ಬಿಜೆಪಿ ಮತ್ತು ಹಿಂದೂಪರ ಸಂಘ ಪರಿವಾರದ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು)ಸಮಾಜದ ಕೆಲವೊಂದು ಪಟ್ಟಭದ್ರ ಹಿತಾಸಕ್ತಿಗಳು ಸೇರಿ ದುರುದ್ದೇಶ ಪೂರ್ವಕವಾಗಿ ಸುಳ್ಳು ಪ್ರಕರಣಗಳು ದಾಖಲಾಗಿರುತ್ತವೆ. ಈ
ರೀತಿಯ ದುರುದ್ದೇಶದ ಸುಳ್ಳು ಪ್ರಕರಣಗಳನ್ನು ಹಿಂಪಡೆಯುವಂತೆ ಕಾರ್ಯಕರ್ತರುಗಳು ಮನವಿ ಸಲ್ಲಿಸಿರುತ್ತಾರೆ.ಈ ಹಿನ್ನೆಲೆಯಲ್ಲ, ರಾಜ್ಯದಾದ್ಯಂತ ಬಿಜೆಪಿ ಹಾಗೂ ಹಿಂದೂಪರ ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ದುರುದ್ದೇಶ ಪೂರ್ವಕವಾಗಿ ಮೊಕದ್ದಮೆಗಳನ್ನು ಹಿಂಪಡೆಯುವಂತೆ ಕೋರುತ್ತೇನೆ' ಎಂದು ಕೋಟ ಶ್ರೀನಿವಾಸ ಪೂಜಾರಿ ಮನವಿಯಲ್ಲಿ ತಿಳಿಸಿದ್ದಾರೆ















