ಬಂಟ್ವಾಳ: ಕಳ್ಳಿಗೆ ಗ್ರಾಮದ ಜಾರಂದಗುಡ್ಡೆಯಲ್ಲಿ ಜೆಸಿಐ ಬಂಟ್ವಾಳ ನೇತೃತ್ವ, ದಾನಿಗಳ ಸಹಕಾರ ಹಾಗೂ ವಿವಿಧ ಸಂಘ ಸಂಸ್ಥೆಗಳ ಶ್ರಮದಾನದ ಮೂಲಕ ನಿರ್ಮಾಣಗೊಳ್ಳುತ್ತಿರುವ ನಾಗಮಜ್ಜಿ ಮನೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 50 ಸಾವಿರ ರೂ. ಆರ್ಥಿಕ ನೆರವು ಸಿಕ್ಕಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆದೇಶದ ಮೇರೆಗೆ, ಧ.ಗ್ರಾ.ಯೋ. ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್ ಅವರ ಸೂಚನೆಯಂತೆ ಶುಕ್ರವಾರ ಜನಜಾಗೃತಿ ವೇದಿಕೆ ಹಾಗೂ ವಿಪತ್ತು ನಿರ್ವಹಣಾ ಘಟಕದ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಜಾರಂದಗುಡ್ಡೆಗೆ ಭೇಟಿ ನೀಡಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ
ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ಮೇಲ್ವಿಚಾರಕಿ ಹರಿಣಾಕ್ಷಿ ರೈ, ಸೇವಾಪ್ರತಿನಿಧಿ ಭವ್ಯಾ, ಕಳ್ಳಿಗೆ ಗ್ರಾಪಂ ಅಧ್ಯಕ್ಷೆ ಯಶೋದಾ, ಜೆಸಿಐ ಬಂಟ್ವಾಳದ ಕಾರ್ಯದರ್ಶಿ ರೋಶನ್ ರೈ, ನಿಕಟ ಪೂರ್ವಾಧ್ಯಕ್ಷ ಸದಾನಂದ ಬಂಗೇರ, ಸದಸ್ಯ ಮನೋಜ್ ಕನಪಾಡಿ, ನಾಗಮಜ್ಜಿ, ಜಯಂತಿ ಮೊದಲಾದವರು ಉಪಸ್ಥಿತರಿದ್ದರು.















