ಮಂಗಳೂರು:ನಗರದ ಹೊರವಲಯದ ಮಲ್ಲೂರು ಎಂಬಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಗುಡ್ಡ ಕುಸಿದು ಮನೆಯ ಗೋಡೆಯ ಮೇಲೆ ಬಿದ್ದ ಪರಿಣಾಮ ಮನೆಯ ಒಂದು ಭಾಗ ಕುಸಿದು ಹಾನಿ ಉಂಟಾಗಿದೆ.
ಇಂದು ಮುಂಜಾನೆ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಮಹಿಳೆ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಯಾದಿಂದ ಪಾರಾಗಿದ್ದಾರೆ.
ಘಟನೆಯಿಂದ ಬೀಪಾತುಮ್ಮ (72) ಗಾಯಗೊಂಡಿದ್ದಾರೆ.ಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬರ ಮನೆಯ ಹಿಂಭಾಗವಿದ್ದ ಭಾರೀ
ಗಾತ್ರದ ಗುಡ್ಡ ಕುಸಿದು ಬಿದ್ದಿದೆ. ಇದರಿಂದ ಮನೆ ಗೋಡೆ ಕುಸಿದು ಬಿದ್ದು ಮನೆಯಲ್ಲಿದ್ದ ಬೀಪಾತುಮ್ಮ ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಮನೆಯಲ್ಲಿ ಒಬ್ಬರೇ ಇದ್ದ ಕಾರಣ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.















