Coastal Bulletin

ಬೆಂಗಳೂರು(ಅ.29): ಸ್ಯಾಂಡಲ್‌ವುಡ್ ಪವರ್‌ಸ್ಟಾರ್ ನಟ ಪುನೀತ್ ರಾಜ್‌ ಕುಮಾರ್ ಲಘು ಹೃದಯಾಘಾತದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ಗೆ ಅನಾರೋಗ್ಯವಾಗಿದ್ದು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪುನೀತ್ ರಾಜ್ ಕುಮಾರ್ ಗೆ ಲಘು  ಹೃದಯಾಘಾತ ಸಂಭವಿಸಿದ್ದು ವೈದ್ಯರು ಸದ್ಯ ಇಸಿಜಿ ಮಾಡುತ್ತಿದ್ದಾರೆ. ಸದ್ಯ ಯಾವುದೇ ಗಂಭೀರ ಸಮಸ್ಯೆ ಇಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ.ಮನೆಯಲ್ಲಿರುವ ಜಿಮ್

ನಲ್ಲಿ ವರ್ಕೌಟ್ ಮಾಡುವಾಗ ಆರೋಗ್ಯದಲ್ಲಿ ಏರು ಪೇರಾಗಿತ್ತು ಎಂದು ತಿಳಿದುಬಂದಿದೆ. ಜಿಮ್ ಮಾಡುವಾಗ ನಟ ಪುನೀತ್ ಅಲ್ಲಿಯೇ ಕುಸಿದು ಬಿದ್ದಿದ್ದರು. ತಕ್ಷಣ ಅವರ ಆಪ್ತ ಸಹಾಯಕರು ನಟನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ವಿಕ್ರಂ‌ ಆಸ್ಪತ್ರೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಸೋಮೆಂದು ಮುಖರ್ಜಿ, ಡಿಸಿಪಿ ಅನುಚೇತ್ ದೌಡಾಯಿಸಿದ್ದಾರೆ.

Leave a Comment