Coastal Bulletin

ಪುತ್ತೂರು: ಪುತ್ತೂರು‌ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ಅಕ್ರಮವಾಗಿ ನಿರ್ಮಾಣವಾದ ಅಂಗಡಿಗಳ ತೆರವು ಕಾರ್ಯಾಚರಣೆ ಜು.23 ರಂದು ಬೆಳಗ್ಗೆ ನಗರಸಭೆ ಅಧಿಕಾರಿಗಳ ನೇತೃತ್ವದಲ್ಲಿ ನಡೆಯಿತು.

ಅನುಮತಿಯಿಲ್ಲದೆ ವ್ಯಾಪಾರ ಚಟುವಟಿಯನ್ನು ಮುಂದುವರಿಸುತ್ತಿದ್ದವರಿಗೆ ಅಧಿಕಾರಿಗಳು ಈ ಮೂಲಕ ಬಿಸಿ ಮುಟ್ಟಿಸಿದ್ದಾರೆ.

ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪೊಲೀಸ್ ಬಂದೋಬಸ್ತ್ ನೊಂದಿಗೆ

ನಗರಸಭೆ ವ್ಯಾಪ್ತಿಯ ಹಲವೆಡೆ ಅಕ್ರಮವಾಗಿ ನಿರ್ಮಾಣಗೊಂಡ ಸಣ್ಣ ಪುಟ್ಟ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು.ತಳ್ಳು ಗಾಡಿಯ ಅನುಮತಿ ಪಡೆದು ಅಕ್ರಮ ಕಟ್ಟಡ ನಿರ್ಮಿಸಿದವರ ಕಟ್ಟಡ ತೆರವು ಮಾಡಿದ್ದಾರೆ.

Leave a Comment