Coastal Bulletin

ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ಷಾರ್ಟಸ್ ಎಂಬಲ್ಲಿ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ವತಿಯಿಂದ ಪ್ರತೀ ವರ್ಷದಂತೆ ಇದೇ 5ರಂದು ರಾತ್ರಿ ಗಂಟೆ 9.30ಕ್ಕೆ ಕಟೀಲು ಮೇಳದಿಂದ 29ನೇ ವರ್ಷದ ಯಕ್ಷಗಾನ ಬಯಲಾಟ ನಡೆಯಲಿದೆ.

ಅಭಿಮನ್ಯು, ಬಬ್ರುವಾಹನ ಮತ್ತು ಜಾಂಬವತಿ ಕಲ್ಯಾಣ' ಯಕ್ಷಗಾನ ಪ್ರದರ್ಶನಗೊಳ್ಳಲಿದ್ದು, ರಾತ್ರಿ ಗಂಟೆ 8.30ಕ್ಕೆ ಚೌಕಿ ಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಇದೇ 6ರಂದು ಬೆಳಿಗ್ಗೆ 10

ಗಂಟೆಗೆ ರಾಯಿ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Comment