ಬೊಳಾಂತೂರು: ಗ್ರಾಮ ಪಂಚಾಯತ್ ಕಛೇರಿಯಲ್ಲಿ ವಿಲೇವಾರಿ ಶಿಬಿರ.

Coastal Bulletin
ಬೊಳಾಂತೂರು: ಗ್ರಾಮ ಪಂಚಾಯತ್ ಕಛೇರಿಯಲ್ಲಿ ವಿಲೇವಾರಿ ಶಿಬಿರ.

ಬಂಟ್ವಾಳ : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ಬಾಳ್ತಿಲ, ಗೋಳ್ತಮಜಲು, ವೀರಕಂಭ, ಬೊಳಾಂತೂರು ಗ್ರಾಮಗಳನ್ನು ಒಳಗೊಂಡ ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಬೊಳಾಂತೂರು ಗ್ರಾ.ಪಂ ಕಛೇರಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ ಜಯಂತಿ ವಿ.ಪೂಜಾರಿ ಮಾತನಾಡಿ ನನ್ನ ಮೇಲೆ ವಿಶ್ವಾಸವಿಟ್ಟು ಬಂಟ್ವಾಳ ತಾಲೂಕಿನ ಅಧ್ಯಕ್ಷರಾಗಿ ಮಾಜಿ ಸಚಿವರಾದ ರಮಾನಾಥ ರೈ ರವರು ನೇಮಕಮಾಡಿರುತ್ತಾರೆ. ಅವರ ಇಚ್ಚೆಯ ಪ್ರಕಾರ ಪ್ರತೀ ಗ್ರಾಮದ ಬಡವರಿಗೂ ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನ ದೊರೆಯಬೇಕು ಇದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರ ಆಶಯ ಅದಕ್ಕೆ ಪೂರಕವಾಗಿ ಪ್ರತಿ ವಲಯದಲ್ಲಿ ಇದರ ಶಿಬಿರ ನಡೆಸಬೇಕು.ಎಂದು ಸಲಹೆ ಸೂಚನೆ ನೀಡಿದ್ದರು.ತಾಲೂಕು ಮಟ್ಟದ ಅಧಿಕಾರಿಗಳ ಸಹಕಾರದಿಂದ ಯಶಸ್ವಿಯಾಗಿ ಈ ಕಾರ್ಯಕ್ರಮ ನಡೆಯುತ್ತಿದೆ .ಇದು ನಾಲ್ಕನೇ ಕಾರ್ಯಕ್ರಮ ಬಂಟ್ವಾಳ ತಾಲೂಕಿನಲ್ಲಿ ಒಟ್ಟು 10 ವಲಯಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದರು.

ಮುಖ್ಯ ಅತಿಥಿಯಾಗಿ ಅಗಮಿಸಿದ ಜಿಲ್ಲಾ ಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ರವರು ಮಾತನಾಡಿ ಕ್ರಿಯಾಶೀಲ ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ರವರ ನೇತೃತ್ವದಲ್ಲಿ ಉತ್ತಮವಾದ ಕಾರ್ಯಕ್ರಮ ಇದು...ಪ್ರತೀ ಬಡವರ ಕಲ್ಯಾಣ ಈ ಶಿಬಿರದ ಮೂಲಕ ನಡೆಯಲಿ ಎಂದು

ಶುಭಹಾರೈಸಿದರು...

ತಾಲೂಕು ಪಂ ಮಾಜಿ ಉಪಾಧ್ಯಕ್ಷ ಅಬ್ಬಸ್ ಆಲಿ ಮಾತನಾಡಿ ಕರ್ನಾಟಕ ರಾಜ್ಯದಲ್ಲಿಯೇ ಇಂತಹ ಕಾರ್ಯಕ್ರಮ ಪ್ರಥಮವಾಗಿ ಬಂಟ್ವಾಳದಲ್ಲಿ ನಡೆಯುತಿದೆ,ಇದರ ಪ್ರಯೋಜನ ಪ್ರತಿಯೊಬ್ಬರು ಪಡೆಯಿರಿ ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು..

ಮಾಜಿ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ ಶುಭಹಾರೈಸಿದರು.. ಬೊಳಾಂತುರು ಗ್ರಾ.ಪಂ ಅದ್ಯಕ್ಷೆ ಶಾಲಿನಿ ರವರ ದೀಪ ಬೆಳಗಿಸಿ ಉದ್ಘಾಟಿಸಿದರು.ಈ ಕಾರ್ಯಕ್ರಮದಲ್ಲಿ ಗ್ರಾ‌ಪಂ ಉಪಾದ್ಯಕ್ಷ ಯಾಕುಬ್, ಗ್ರಾ.ಪಂ ಸದಸ್ಯರಾದ ಚಂದ್ರಶೇಖರ್ ರೈ,ಅಶ್ರಫ್,ಅನ್ಸಾರ್,ಹಿತಾ ಶೆಟ್ಟಿ, ಮಹಾಲಕ್ಷ್ಮೀ, ಅನಿತಾ,ಸಂಧ್ಯಾ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಭಂಡಾರಿ, ಜಿಲ್ಲಾ ಗ್ಯಾರಂಟಿ ಸಮಿತಿಯ ಸದಸ್ಯ ನಾರಾಯಣ ನಾಯ್ಕ, ಅಲೆಸ್ಟರ್,ಪ್ರಮುಖರಾದ ವಿಶ್ವಾಜೀತ್ ರೈ,ತಾಲೂಕು ಗ್ಯಾರಂಟಿ ಯೋಜನೆಗಳ ಸದಸ್ಯರಾದ ಐಡಾ ಸುರೇಶ್,ಕಾಂಚಾಲಕ್ಷಿ,ಅಬ್ದುಲ್ ಕರೀಂ,ಕೃಷ್ಣಪ್ಪ ಪೂಜಾರಿ, ವಿನಯ್ ಕುಮಾರ್ ಸಿಂಧ್ಯಾ,ಸಿರಾಜ್ ಮದಕ,ಹರ್ಷನ್ ಬಿ,ಚಂದ್ರಶೇಖರ್ ಆಚಾರ್ಯ,ಸತೀಶ್ ಕೆ,. ಉಪಸ್ಥರಿದ್ದರು..

ಬೊಳಾಂತುರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಸ್ವಾಗತಿಸಿ ,ಧನ್ಯವಾದ ಸಲ್ಲಿಸಿದರು..

ಸುಮಾರು 200 ರಿಂದ 250 ಜನ ಈ ಶಿಬಿರದ ಪ್ರಯೋಜನ ಪಡೆದುಕೊಂಡರು.ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥರಿದ್ದರು.

Leave a Comment