ಶೃಂಗೇರಿ ಭೇಟಿ ಹಿನ್ನೆಲೆ- ಮಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್

Coastal Bulletin
ಶೃಂಗೇರಿ ಭೇಟಿ ಹಿನ್ನೆಲೆ- ಮಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್

ದ.ಕ :ರಾಷ್ಟ್ರಪತಿಗಳಾದ ರಾಮನಾಥ ಕೋವಿಂದ್ ಅವರು ರಾಜ್ಯದ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 8 ರಂದು ಶೃಂಗೇರಿಗೆ ಭೇಟಿ ನೀಡುವ ಸಲುವಾಗಿ ಅಕ್ಟೋಬರ್ 7 ರಂದು ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದರು.

ಮಂಗಳೂರು ಇಂಟರ್ನ್ಯಾಷನಲ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಮಾಜ ಕಲ್ಯಾಣ ಹಾಗೂ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ, ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರದ ಪ್ರಥಮ ಪ್ರಜೆಯನ್ನು ಸ್ವಾಗತಿಸಿದರು. ನಂತರ ಅಲ್ಲಿಂದ ರಾಷ್ಟ್ರಪತಿಯವರು ವಾಸ್ತವ್ಯ ಕ್ಕಾಗಿ ನಗರದ ಅತಿಥಿ  ಗೃಹಕ್ಕೆ ಪ್ರಯಾಣಿಸಿದರು.

Leave a Comment